ಪುತ್ತೂರು ತಾ|ನರೇಗದಲ್ಲಿ ಸತತ 3 ವರ್ಷಗಳಿಂದ ಗುರಿಮೀರಿದ ಸಾಧನೆ

0

ಪುತ್ತೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಗ್ರಾಮ ಪಂಚಾಯತ್‌ಗಳ ಮೂಲಕ ಗ್ರಾಮೀಣ ಭಾಗದ ಜನರ ಕೈಹಿಡಿದಿದೆ. ಇದಕ್ಕೆ ಕಳೆದ ಮೂರು ವರ್ಷಗಳು ಸರಕಾರ ನೀಡಿದ್ದ ಮಾನವ ದಿನಗಳ ಗುರಿಯನ್ನು ಸಾಧಿಸುವ ಮೂಲಕ ಪುತ್ತೂರು ತಾಲೂಕು ಗುರಿ ಮೀರಿದ ಸಾಧನೆಯನ್ನು ಮಾಡಿರುವುದೇ ಸಾಕ್ಷಿ.

ರಾಜ್ಯ ಸರಕಾರ 2022-23ನೇ ಆರ್ಥಿಕ ವರ್ಷದಲ್ಲಿ ಪುತ್ತೂರು ತಾಲೂಕಿಗೆ 1,79,822 ಮಾನವ ದಿನ ಸೃಜನೆಯ ಗುರಿಯನ್ನು ನಿಗದಿಪಡಿಸಿತ್ತು. ಆದರೆ ತಾಲೂಕು 2,05,707 ಮಾನವ ದಿನಗಳನ್ನು ಸೃಜಿಸುವ ಮೂಲಕ ಶೇ.115 ಪ್ರಗತಿಯೊಂದಿಗೆ ಗುರಿ ಮೀರಿ ಸಾಧಿಸಿದೆ.

22 ಗ್ರಾಮ ಪಂಚಾಯತ್‌ಗಳ ಮೂಲಕ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಕುಶಲ ಉದ್ಯೋಗವನ್ನು ಹಾಗೂ ಗ್ರಾಮೀಣ ಜನತೆಯ ಜೀವನೋಪಾಯಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಅರ್ಹ ಫಲಾನುಭವಿಗಳಿಗೆ ನೀಡುವ ಮೂಲಕ ಹಾಗೂ ಗ್ರಾಮೀಣ ಮೂಲಸೌಕರ್ಯಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಂಡು ಗುರಿ ಮೀರಿದ ಸಾಧನೆಯನ್ನು ಮಾಡಿದೆ ಎಂದು ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here