ಎ.8:ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭ

0

.


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಎಪ್ರಿಲ್ 8ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾ ಭವನದಲ್ಲಿ ನಡೆಯಲಿದೆ.

2021-22ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ.


ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು.


ಅಂದು ಬೆಳಿಗ್ಗೆ 9.30ಕ್ಕೆ ನಡೆಯುವ ಈ ಸಮಾರಂಭದಲ್ಲಿ ಮೈಸೂರಿನ ಸಿಎಫ್‌ಟಿಆರ್‌ಐ ನ ಪೂರ್ವ ನಿರ್ದೇಶಕ ಹಾಗೂ ಹೆಸರಾಂತ ವಿಜ್ಞಾನಿ ಡಾ.ವಿ.ಪ್ರಕಾಶ್ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪೂರ್ವ ವಿದ್ಯಾರ್ಥಿ ಪ್ರಸ್ತುತ ಬೆಂಗಳೂರಿನ ಲ್ಯಾಮ್ ರೀಸರ್ಚ್ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಮ್ಯಾನೇಜರ್ ಆಗಿರುವ ಆಸ್ಟ್ರನ್ ಲೋಬೋ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ ಕೆ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here