ಪುತ್ತೂರು: ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.
ಸಹಸ್ರಾರು ತ್ಯಾಗ, ಬಲಿದಾನಗಳ ಪ್ರತೀಕವಾಗಿ ಸೈದ್ದಾಂತಿಕ ಹೋರಾಟದ ಪ್ರತಿಫಲವೇ ಬಿಜೆಪಿ ಪಕ್ಷವಾಗಿದ್ದು ಈ ದಿನವನ್ನು ಸಂಭ್ರಮದಿಂದ ಆಚರಿಸೋಣ. ವಿಜಯದ ಸಂಕಲ್ಪ ಮಾಡೋಣ ಎಂದು ಬಿಜೆಪಿ ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಸಹ ಪ್ರಭಾರಿ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ ಕುಂದಾಪುರ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಆರ್. ಸಿ ನಾರಾಯಣ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಜಯಶ್ರೀ ಎಸ್ ಶೆಟ್ಟಿ ಮತ್ತು ಯುವರಾಜ್ ಕೆ ಪೆರಿಯತ್ತೋಡಿ, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರಗಳ ಪದಾಧಿಕಾರಿಗಳು ಹಾಗೂ ಪಕ್ಷದ ಹಿರಿಯ ಕಿರಿಯ ಕಾರ್ಯಕರ್ತರು ಭಾಗವಹಿಸಿದರು.