ಎ.9: ನಿಡ್ಪಳ್ಳಿ ದೇವಸ್ಥಾನದಲ್ಲಿ 19 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ನಿಡ್ಪಳ್ಳಿ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ನಿಡ್ಪಳ್ಳಿ, ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ ಎ.9 ರಂದು ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ 19 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಲಿದೆ.

ಬೆಳಿಗ್ಗೆ ಗಂಟೆ 9 ಕ್ಕೆ ಸರಿಯಾಗಿ ಪೂಜೆ ಪ್ರಾರಂಭವಾಗಲಿದ್ದು ಮಧ್ಯಾಹ್ನ ಮಹಾ ಮಂಗಳಾರತಿ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ಪೂಜಾ ಸಮಿತಿ ಅಧ್ಯಕ್ಷ ಮಂಜುನಾಥ ರೈ ಮತ್ತು ಸಮಿತಿ ಸದಸ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here