ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ಎ.8ರಂದು ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ.
ಕೊಳೆವೆ ಬಾವಿ, ನದಿ ನೀರು, ಬಾವಿ, ಕೆರೆಗಳು ಬಿಸಿಲಿನ ತಾಪಕ್ಕೆ ಬತ್ತಿ ಹೋಗುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗಲಿದೆ. ಇದರಿಂದ ಕೃಷಿ ಚಟುವಟಿಕೆಗೆ ತೊಂದರೆಯಾಗಲಿದೆ.
ಹೀಗಾಗಿ ವರುಣ ಕೃಪೆಗಾಗಿ ದೇವರಲ್ಲಿ ಗ್ರಾಮಸ್ಥರು ಒಟ್ಟಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಹಾಗೂ ಸೀಯಾಳಾಭಿಷೇಕ ನಡೆಸಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ ತಿಳಿಸಿದ್ದಾರೆ.