ಎ.10: ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯಿಂದ ಕ್ಯಾಂಪಸ್ ನೇಮಕಾತಿ

0

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪನಿ ಓಪ್ಟಮ್‌ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಎ.10ರಂದು ರಂದು ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಆಯೋಜಿಸಲಾಗಿದೆ.


ಓಪ್ಟಮ್ ಕಂಪನಿಯು 1,25,000ಕ್ಕೂ ಹೆಚ್ಚು ಉದ್ಯೋಗಿಗಳಿರುವ ಬಹುರಾಷ್ಟ್ರೀಯ ಸಂಸ್ಥೆಯಾಗಿದ್ದು ಪ್ರಸ್ತುತ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ. ಪ್ರಸ್ತುತ ವರ್ಷದಲ್ಲಿ ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಆವಶ್ಯಕತೆಯಿದ್ದು ಬದ್ಧತೆ ಹಾಗೂ ಉತ್ಸಾಹ ಹೊಂದಿರುವ ಅರ್ಹ ಪದವೀಧರರನ್ನು ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮದ ಮೂಲಕ ನೇಮಕ ಮಾಡುವ ಗುರಿಯನ್ನು ಹೊಂದಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾಲೇಜಿನಲ್ಲಿ 5 ವಾರಗಳ ಕಡ್ಡಾಯ ತರಬೇತಿ ಕಾರ್ಯಕ್ರಮವನ್ನು ಕಂಪನಿಯ ವತಿಯಿಂದ ಆಯೋಜಿಸಲಾಗುತ್ತದೆ. 2022ರಲ್ಲಿ ಅಥವಾ ಹಿಂದಿನ ವರ್ಷಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಆಸಕ್ತರು ಸದರಿ ಕಾರ್ಯಕ್ರಮದ ಪ್ರಯೋಜನ ಪಡೆಯಬಹುದು ಎಂಬುದಾಗಿ ಕಾಲೇಜಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here