ಪುತ್ತೂರು:ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವದ ಅಭಿನಂದನಾ ಸಭೆಯು ಎ.9ರಂದು ನಡೆಯಲಿದೆ.
ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿಹೋಮ, ಪಂಚವಿಂಶತಿ ಕಲಶ ಪೂಜೆ, ಏಕದಶರುದ್ರಾಭಿಷೇಕ, ಆಶ್ಲೇಷ ಬಲಿ, ನಾಗತಂಬಿಲ, ಪವಮಾನಾಭಿಷೇಕ, ಮಧ್ಯಾಹ್ನ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರುವಲ್ಲಿ ಸಹಕರಿಸಿದವರಿಗೆ ಅಭಿನಂದನಾ ಸಭೆ ನಡೆಯಲಿದೆ. ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ದೈವಗಳಿಗೆ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ದೇವರಿಗೆ ರಂಗಪೂಜೆ, ದೈವಗಳಿಗೆ ತಂಬಿಲ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.