ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು`ಸುವಿಧಾ’ ತಂತ್ರಾಂಶ ವ್ಯವಸ್ಥೆ

0

ಮಂಗಳೂರು:ರಾಜಕೀಯ ಪಕ್ಷಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಸುವಿಧಾ ಆನ್‌ಲೈನ್ ತಂತ್ರಾಂಶವನ್ನು ಜಾರಿಗೆ ತಂದಿದೆ.
ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅಗತ್ಯವಿರುವ ಸಭೆ, ಸಮಾರಂಭ, ಜಾಥಾ, ವಾಹನ ಇತ್ಯಾದಿಗಳ ಅನುಮತಿಗಾಗಿ ಸುವಿಧಾ' ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.ಇದು ಏಕಗವಾಕ್ಷಿ ವ್ಯವಸ್ಥೆಯಾಗಿದ್ದು ಸಲ್ಲಿಕೆಯಾದ ಅರ್ಜಿಗಳನ್ನು ಸಂಬಂಧಿಸಿದ ಚುನಾವಣಾ ಅಧಿಕಾರಿಗಳು ಪರಿಶೀಲಿಸಿ ಸಂಬಂಧ ಪಟ್ಟ ಇಲಾಖೆಗಳಿಂದ ಒಪ್ಪಿಗೆ ಪಡೆದು ಅನುಮತಿ ಪತ್ರವನ್ನು ನೀಡುತ್ತಾರೆ. ಅರ್ಜಿದಾರರು ತಮ್ಮ ಅನುಮತಿ ಪತ್ರಗಳನ್ನು ಆನ್‌ಲೈನ್ ಮೂಲಕವೇ ಡೌನ್‌ಲೋಡ್ ಮಾಡಿಕೊಳ್ಳಬಹುದು.ಅನುಮತಿಗೆ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.ಅರ್ಜಿ ಸ್ವೀಕರಿಸಿ ತ್ವರಿತವಾಗಿ ವಿಲೇವಾರಿ ಮಾಡಲು ಎಲ್ಲಾ ಮತ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿಸುವಿಧಾ ಏಕ ಗವಾಕ್ಷಿ ಕೌಂಟರ್’ಗಳನ್ನು ತೆರೆಯಲಾಗಿದೆ.ಜಿಲ್ಲಾ ವ್ಯಾಪ್ತಿಯ ಅನುಮತಿಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ದ.ಕ. ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here