ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ನೇಮಕ

0

ಪುತ್ತೂರು: ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರ ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು ನೇಮಕ ಮಾಡಿದ್ದಾರೆ.

ವಿದ್ಯಾರ್ಥಿ ಕಾಂಗ್ರೆಸ್ ಸಂಘಟನೆ (ಎನ್ ಎಸ್ ಯು ಐ)ಮೂಲಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ ನೂರುದ್ದೀನ್‌ರವರು, ದ.ಕ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಯಾಗಿ, ಕೆಪಿಸಿಸಿ ಅಲ್ಪಸಂಖ್ಯಾತರ ಸಮಿತಿಯ ಉಪಾಧ್ಯಕ್ಷರಾಗಿ,ಸೇವೆ ಸಲ್ಲಿಸಿದ್ದರು.

ಪುತ್ತೂರಿನಲ್ಲಿ ನ್ಯಾಯವಾದಿ ಮತ್ತು ನೋಟರಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು,ರಾಜಕೀಯ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here