ಪುತ್ತೂರು: ಬನ್ನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಚಿಕ್ಕಮುಡ್ನೂರು ಅಡ್ಲಿಮಜಲು ಎಂಬಲ್ಲಿ ಸಿಮೆಂಟ್ ಪ್ರೊಡೆಕ್ಷನ್ ಜಾಹೀರಾತು ಘಲಕವನ್ನು ರಸ್ತೆಯಲ್ಲೆ ಅಳವಡಿಸಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟು ಮಾಡಿರುವುದಾಗಿ ಆರೋಪಿಸಿ ಚಿಕ್ಕಮುಡ್ನೂರು ಕಲಿಯುಗ ಸೇವಾ ಸಮಿತಿ ವತಿಯಿಂದ ತಾಲೂಕು ಪಂಚಾಯತ್ ಕಾರ‍್ಯನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯತ್‌ಗೆ ದೂರು ನೀಡಲಾಗಿದೆ.
ಅಡ್ಲಿಮಜಲು ಇಲ್ಲಿ ಕಾರ್ಯಾಚರಿಸುತ್ತಿರುವ ಈ ಸಿಮೆಂಟ್ ಪ್ರೊಡಕ್ಟ್ಸ್ ಘಟಕ ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ರಸ್ತೆ ಬದಿಯಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುವ ರೀತಿಯಲ್ಲಿ ತಮ್ಮ ಪ್ರೊಡಕ್ಟ್ಸ್‌ಗಳ ಜಾಹೀರಾತು ಫಲಕವನ್ನು ಅಳವಡಿಸಲಾಗಿದೆ. ಜನರಿಗೆ ರಸ್ತೆಯಲ್ಲಿ ಸಂಚಾರಕ್ಕೆ ತೊಂದರೆ ಉಂಟುಮಾಡುವ ದುರುದ್ದೇಶದಿಂದ ಈ ರೀತಿ ಫಲಕಗಳನ್ನು ಅಳವಡಿಸಲಾಗಿದೆ.
ಈ ಘಟಕದಿಂದ ಆಗಾಗ ಇಲ್ಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು ಇದರ ಪರವಾನಿಗೆ ನವೀಕರಣ ಸಂದರ್ಭ ಸೂಕ್ತ ಎಚ್ಚರಿಕೆ ನೀಡುವಂತೆ ಮತ್ತು ಜಾಹಿರಾತು ಫಲಕವನ್ನು ತೆರವುಗೊಳಿಸಲು ಸೂಕ್ತ ಕ್ರಮ ವಹಿಸಲು ದೂರಿನಲ್ಲಿ ಒತ್ತಾಯಿಸಲಾಗಿದೆ.