ಆದರ್ಶ ವಿವಿಧೋದ್ದೇಶ ಸಹಕಾರ ಸ೦ಘ 2022-23ನೇ ಸಾಲಿನಲ್ಲಿ 595.46 ಕೋಟಿ ರೂ., ವ್ಯವಹಾರ,

0

2.15 ಕೋಟಿ ರೂ. ನಿವ್ವಳ ಲಾಭ: ಕೆ.ಸೀತಾರಾಮ ರೈ ಸವಣೂರು


ಪುತ್ತೂರು: ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 21 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ 13 ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, 2022-23 ನೇ ಸಾಲಿನ ಆರ್ಥಿಕ ವರ್ಷದಲ್ಲಿ ತನ್ನ ಸಂಘದ ಸದಸ್ಯರ ಸಹಕಾರದಿಂದ ಅತ್ಯುತ್ತಮ ಕಾರ್ಯದಕ್ಷತೆಯನ್ನು ಸಾಧಿಸಿ ಸಂಘವು 595.46 ಕೋಟಿ ರೂ. ಗಳ ದಾಖಲೆಯ ವ್ಯವಹಾರವನ್ನು ನಡೆಸಿ ರೂ.2.15 ಕೋಟಿ ರೂ. ಗಳಷ್ಟು ಲಾಭವನ್ನು ಗಳಿಸಿರುತ್ತದೆ ಎಂದು ಸಂಘದ ಅಧ್ಯಕ್ಷ ಕೆ.ಸೀತಾರಾಮ ಸವಣೂರು ರವರು ತಿಳಿಸಿದ್ದಾರೆ.


ಸಂಘದ 2022-23 ನೇ ಆರ್ಥಿಕ ಸಾಲಿನ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 7961 ಸದಸ್ಯರಿದ್ದು ಒಟ್ಟು 2.92 ಕೋಟಿ ರೂ. ಗಳಷ್ಟು ಪಾಲು ಬಂಡವಾಳವನ್ನು ಹೊಂದಿರುತ್ತದೆ. ಸಂಘವು 116.38 ಕೋಟಿ ರೂ. ಠೇವಣಿಯನ್ನು ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 16.60 ರಷ್ಟು ಹೆಚ್ಚಳವಾಗಿದೆ. ರೂ. 91.16 ಕೋಟಿ ರೂ.ಗಳಷ್ಟು ಹೊರಬಾಕಿ ಸಾಲ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.23.12 ರಷ್ಟು ಹೆಚ್ಚಳವಾಗಿದೆ. ಸಂಘವು 3.02 ಕೋಟಿ ರೂ.ಗಳಷ್ಟು ಕ್ಷೇಮ ನಿಧಿ ಮತ್ತು 1.97 ಕೋಟಿ ರೂ. ಗಳಷ್ಟು ಇತರ ನಿಧಿಗಳನ್ನು ಹೊಂದಿ, ರೂ. 124.57 ಕೋಟಿಗಳಷ್ಟು ದುಡಿಯುವ ಬಂಡವಾಳವನ್ನು ಹೊಂದಿರುತ್ತದೆ. ಸಂಘವು ಸ್ಥಾಪನೆಗೊಂಡ ವರ್ಷದಿಂದ ತನ್ನ ಸದಸ್ಯರಿಗೆ ಡಿವಿಡೆಂಡ್ ನೀಡಿಕೊಂಡು ಬರುತ್ತಿರುವ ಮತ್ತು ಆಡಿಟ್ ವರ್ಗದಲ್ಲಿ ಸತತವಾಗಿ “ಏ” ತರಗತಿಯನ್ನು ಕಾಯ್ದುಕೊ೦ಡು ಬ೦ದಿರುವ ಏಕೈಕ ಸಂಘವಾಗಿರುತ್ತದೆ. ಸಂಘದ ಕೇಂದ್ರ ಕಚೇರಿಗೆ ಸ್ವಂತ ಕಟ್ಟಡವನ್ನು ಹೊಂದುವ ಉದ್ದೇಶದಿಂದ ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ 0.75 ಸೆಂಟ್ಸ್ ಪರಿವರ್ತಿತ ನಿವೇಶನವನ್ನು ರೂ.1,28,99,100 ವೆಚ್ಚದಲ್ಲಿ ಈಗಾಗಲೇ ಸಂಘದ ಹೆಸರಿನಲ್ಲಿ ಖರೀದಿ ಮಾಡಲಾಗಿದೆ ಮಾತ್ರವಲ್ಲದೆ ಸಂಘದಲ್ಲಿ ಒಟ್ಟು 55 ಸಿಬ್ಬಂದಿಗಳು ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದಾರೆ ಎ೦ದು ಕೆ.ಸೀತಾರಾಮ ರೈಯವರು ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಈ ಸಾಧನೆಗೆ ಸಹಕರಿಸಿದ ಆಡಳಿತ ಮಂಡಳಿ ನಿರ್ದೇಶಕರಿಗೆ, ಸಿಬ್ಬಂದಿ ವರ್ಗಕ್ಕೆ, ಎಲ್ಲಾ ವರ್ಗದ ಗ್ರಾಹಕರಿಗೆ ಅಧ್ಯಕ್ಷರು ಕೃತಜ್ಞತೆಯನ್ನು ಸಲ್ಲಿಸಿದರು. ಸ೦ಘದ ಉಪಾಧ್ಯಕ್ಷ ಎನ್. ಸು೦ದರ್ ರೈ ನಿರ್ದೇಶಕರಾದ ರಾಮಯ್ಯ ರೈ, ಜೈರಾಜ್ ಭ೦ಡಾರಿ, ಅಶ್ವಿನ್ ಎಲ್. ಶೆಟ್ಟಿ ಮತ್ತು ಮಹಾಪ್ರಬ೦ಧಕರಾದ ವಸ೦ತ ಜಾಲಾಡಿ ಉಪಸ್ಥಿತರಿದ್ದರು.

ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ
ಸಂಘವು ತನ್ನ ಎಲ್ಲಾ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳಲ್ಲಿ 5 ರಿಂದ 10 ನೇ ತರಗತಿಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತನ್ನ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನವನ್ನು ಮಹಾಸಭೆಯ ದಿನದಂದು ನೀಡಿಕೊಂಡು ಬರುತ್ತಿದ್ದು, ಈವರೆಗೆ ಒಟ್ಟು ರೂ.17,37,000 ಮೊತ್ತವನ್ನು ಒಟ್ಟು 979 ವಿಧ್ಯಾರ್ಥಿಗಳಿಗೆ ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಿರುತ್ತೇವೆ
ಕೆ.ಸೀತಾರಾಮ ರೈ ಸವಣೂರು
ಅಧ್ಯಕ್ಷರು-ಆದರ್ಶ ವಿವಿಧೋದ್ದೇಶ ಸಹಕಾರ ಸ೦ಘ

LEAVE A REPLY

Please enter your comment!
Please enter your name here