ಪುತ್ತೂರು : ಯಾವುದೇ ಪರೀಕ್ಷೆ ಎದುರಿಸುವಲ್ಲಿ ಆಸಕ್ತಿಯ ಜೊತೆ ನಿರಂತರ ಅಭ್ಯಾಸ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಅಗತ್ಯ ಪುಸ್ತಕಗಳನ್ನು ಸಂಗ್ರಹಿಸಿ ಓದಬೇಕು. ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಅರಿತುಕೊಂಡ ವಿಷಯಗಳ ಬಗ್ಗೆ ಪುನರ್ ಮನನ ಮಾಡಿಕೊಳ್ಳುವ ಅಭ್ಯಾಸ ಹೆಚ್ಚಿಸಿಕೊಂಡರೆ ಪೂರ್ವಭಾವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬಹುದು. ವಿದ್ಯಾರ್ಥಿಗಳು ನಂಬಿಕೆಗಳ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕು. ಸವಾಲುಗಳು ಎದುರಾದಷ್ಟು ಮನುಷ್ಯ ಮತ್ತಷ್ಟು ಬಲಗೊಳ್ಳುತ್ತಾನೆ. ಮೌಲ್ಯದ ಬೇರುಗಳು ಗಟ್ಟಿಯಾದಾಗ ಎಲ್ಲಿ ಬೇಕಾದರೂ ಜೀವನ ಕಂಡುಕೊಳ್ಳಬಹುದು. ಬದುಕಿನ ಯಾವುದೇ ಪರೀಕ್ಷೆಗಳನ್ನು ಎದುರಿಸಬಹುದು. ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ವಾಮನ ಪೈ ರವರು ಹೇಳಿದರು.
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ,ನೀಟ್ ಪರೀಕ್ಷೆಗಳನ್ನು ಎದುರಿಸುವ ಬಗೆಗೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಜೊತೆಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ ಮತ್ತು ಪ್ರಾಂಶುಪಾಲರಾದ ಪ್ರಸಾದ್ಶ್ಯಾ ನಭಾಗ್ ಉಪಸ್ಥಿತರಿದ್ದರು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಜೊತೆಗೆ ಸಂವಾದವನ್ನು ನಡೆಸಿ ಅವರ ಸಂದೇಹಗಳಿಗೆ ಉತ್ತರಿಸಿದರು.