ಇಂದು ಅಧಿಸೂಚನೆ ಪ್ರಕಟ,ನಾಮಪತ್ರ ಸಲ್ಲಿಕೆ ಆರಂಭ

0

ಏ.20 ನಾಮಪತ್ರ ಸಲ್ಲಿಕೆಗೆ ಕಡೇ ದಿನ
ಏ.21 ನಾಮಪತ್ರ ಪರಿಶೀಲನೆ
ಏ.24 ನಾಮಪತ್ರ ಹಿಂಪಡೆಯಲು ಕಡೇದಿನ
ಮೇ 10 ಮತದಾನ ಮೇ 13 ಮತ ಎಣಿಕೆ

ಪುತ್ತೂರು:ರಾಜ್ಯ ವಿಧಾನಸಭೆ ಚುನಾವಣೆಗೆ ಏ.13ರಂದು ಅಧಿಸೂಚನೆ ಪ್ರಕಟವಾಗುವ ಮೂಲಕ ಚಾಲನೆ ದೊರೆಯಲಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ನಾಮಪತ್ರ ಸ್ವೀಕರಿಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಹಾಯಕ ಆಯುಕ್ತರು ಚುನಾವಣಾಧಿಕಾರಿಯಾಗಿದ್ದು ತಾಲೂಕು ಆಡಳಿತ ಸೌಧದಲ್ಲಿರುವ ಸಹಾಯಕ ಆಯುಕ್ತರ ಕಚೇರಿಯಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕಾರ ಪ್ರಕ್ರಿಯೆ ನಡೆಯಲಿದೆ.

ಏ.14 ಅಂಬೇಡ್ಕರ್ ಜಯಂತಿಯ ಸಾರ್ವತ್ರಿಕ ರಜಾ ದಿನ ಮತ್ತು ಏ.16ರ ರವಿವಾರ ಹೊರತು ಪಡಿಸಿ ಉಳಿದ ದಿನಗಳಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.ಬೆಳಿಗ್ಗೆ 11 ಗಂಟೆಯಿಂದ ಅಪರಾಹ್ನ 3 ಗಂಟೆಯ ತನಕ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯ ಜೊತೆಗೆ ಇತರ ನಾಲ್ಕು ಮಂದಿಗೆ ಮಾತ್ರ ಅವಕಾಶವಿದೆ.ಮೆರವಣಿಗೆಯ ವಾಹನ ಮತ್ತು ಬೆಂಬಲಿಗರಿಗೆ ಕಚೇರಿಯಿಂದ 100 ಮೀಟರ್ ದೂರದಲ್ಲಿ ನಿರ್ಬಂಽಸಲಾಗಿದೆ ಎಂದು ಚುನಾವಣಾಽಕಾರಿಯಾಗಿರುವ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾಹಿತಿ ನೀಡಿದ್ದಾರೆ.


ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನವಾಗಿದೆ.ಏ.21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಮಪತ್ರ ಹಿಂಪಡೆಯಲು ಏ.24 ಕಡೆ ದಿನವಾಗಿದೆ.ಮೇ10ರಂದು ಮತದಾನ ಪ್ರಕ್ರಿಯೆಗಳು ನಡೆದು ಮೇ 13ರಂದು ಮತ ಎಣಿಕೆ ನಡೆದು ಮಧ್ಯಾಹ್ನದ ಮೊದಲು -ಫಲಿತಾಂಶ ಪ್ರಕಟವಾಗಲಿದೆ.ಮೇ. 15ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.ತಹಸಿಲ್ದಾರ್ ಕೆ.ಶಿವಶಂಕರ್ ಅವರು ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ.


ಪುತ್ತೂರು ಕ್ಷೇತ್ರಕ್ಕೆ ಸಂಬಂಧಿಸಿ ಬಿಜೆಪಿ, ಆಮ್ ಆದ್ಮಿ, ಎಸ್‌ಡಿಪಿಐ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಇನ್ನಷ್ಟೆ ಆಗಬೇಕಾಗಿದೆ.
ಉಳಿದಂತೆ ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಕಾಂಗ್ರೆಸ್ 166 ಹಾಗೂ ಜೆಡಿಎಸ್ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

LEAVE A REPLY

Please enter your comment!
Please enter your name here