ವಿಧಾನಸಭಾ ಚುನಾವಣೆ: ಬಿಜೆಪಿ ಟಿಕೆಟ್ ಕೈತಪ್ಪಿದ ವಿಚಾರ ಕಾರಣವೇನು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ

0

ಸಣ್ಣ ಬೇಸರವಿದೆಯಾದರೂ ಪಕ್ಷದ ನಿಲುವಿಗೆ ಬದ್ಧ ಸಂಜೀವ ಮಠಂದೂರು

ಪುತ್ತೂರು:ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಣೆಯಾಗಿದ್ದು ಪಕ್ಷದ ಅಭ್ಯರ್ಥಿಯಾಗಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಅವರನ್ನು ಪಕ್ಷ ಆಯ್ಕೆ ಮಾಡಿದೆ.ತನಗೆ ಟಿಕೆಟ್ ಕೈತಪ್ಪಿರುವ ಕುರಿತು ಸುದ್ದಿ’ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಸಂಜೀವ ಮಠಂದೂರು ಅವರು,ಟಿಕೆಟ್ ಕೈತಪ್ಪಿರುವುದಕ್ಕೆ ಕಾರಣ ಏನು ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ’ ಎಂದು ಹೇಳಿದ್ದಾರೆ.


ಪಕ್ಷದ ವಿವಿಧ ಜವಾಬ್ದಾರಿ ನಿರ್ವಹಿಸಿದ ಅನುಭವದಿಂದ ಪಕ್ಷ ಶಾಸಕ ಸ್ಥಾನದ ಅವಕಾಶ ನೀಡಿದೆ.ಅದನ್ನು ಉತ್ತಮವಾಗಿ ನಿಭಾಯಿಸಿದ್ದೇನೆ.ಇದೀಗ ಮತ್ತೊಮ್ಮೆ ನನಗೆ ಅವಕಾಶ ನೀಡಬೇಕಾಗಿತ್ತು.ಆದರೆ ನನಗೆ ಅವಕಾಶ ಸಿಕ್ಕಿಲ್ಲ.ಯಾಕೆ ಅವಕಾಶ ಸಿಕ್ಕಿಲ್ಲ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.ಈ ಬಗ್ಗೆ ಸಣ್ಣ ಮಟ್ಟಿನ ಬೇಸರ ಇದ್ದರೂ ಪಕ್ಷದ ನಿಲುವಿಗೆ ಬದ್ಧನಾಗಿದ್ದೇನೆ’ ಎಂದು ಸಂಜೀವ ಮಠಂದೂರು ಹೇಳಿದರು. ಹಿರೇಬಂಡಾಡಿ ತನ್ನ ಮನೆಯಲ್ಲಿಸುದ್ದಿ’ಯೊಂದಿಗೆ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸಿದ್ದತೆ ಮಾಡಿಕೊಳ್ಳುವಂತೆ ಪಕ್ಷದ ವರಿಷ್ಠರು ನನಗೆ ತಿಳಿಸಿದ್ದರು. ಆದರೆ ಕೊನೆಯ ಘಳಿಗೆಯಲ್ಲಿ ಪಕ್ಷದಿಂದ ಟಿಕೆಟ್ ತಪ್ಪಿರುವ ಕುರಿತು ಮಾಹಿತಿ ಬಂತು.ಆದರೆ ಇದಕ್ಕೆ ಕಾರಣವೇನು ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ಕುರಿತು ಸಣ್ಣ ಬೇಸರವಿದೆ. ಆದರೆ ಪಕ್ಷದ ನಿರ್ಧಾರವಾದ್ದರಿಂದ ಪಕ್ಷದ ನಿಲುವಿಗೆ ಬದ್ಧನಾಗಿದ್ದೇನೆ.ಇಲ್ಲಿನ ತನಕ ನನಗೆ ಪೂರ್ಣ ರೀತಿಯಲ್ಲಿ ಸಹಕರಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದರು.

LEAVE A REPLY

Please enter your comment!
Please enter your name here