ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಕುಂತಳಾ ಶೆಟ್ಟಿಗೆ ಟಿಕೆಟ್ ನೀಡದಿದ್ದಲ್ಲಿ ಪಕ್ಷದ ವಿವಿಧ ಪದಾಧಿಕಾರಿಗಳಿಂದ ರಾಜೀನಾಮೆ-ಶರೂನ್

0

ಪುತ್ತೂರು: ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿಯಾಗಿ ಸ್ಪರ್ಧಿಸಲು ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಟಿ.ಶೆಟ್ಟಿಯವರಿಗೆ ಅವಕಾಶ ನೀಡದೇ ಇದ್ದಲ್ಲಿ ನಾನು ಸೇರಿದಂತೆ ಪಕ್ಷದ ಕೆಲ ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಶರೂನ್ ಸಿಕ್ವೇರಾ ತಿಳಿಸಿದ್ದಾರೆ. ಶಕುಂತಳಾ ಶೆಟ್ಟಿಯವರಿಗೆ ಅವಕಾಶ ದೊರೆಯದೇ ಇದ್ದಲ್ಲಿ ಪಕ್ಷದಲ್ಲಿ ಇದುವರೆಗೆ ದುಡಿದಂತಹ ಕಾರ್ಯಕರ್ತರಿಗೆ ಬೇಸರ ತರಲಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಯನ್ನು ಹೊಂದಿರುವ ಕೆಲವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ.

ಪಕ್ಷದ ಪ್ರಮುಖರಾದ ತಾಲೂಕು ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಅಧ್ಯಕ್ಷ ಸನತ್ ರೈ ಏಳ್ನಾಡುಗುತ್ತು, ಪುತ್ತೂರು ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ವಿಶ್ವಜಿತ್ ಅಮ್ಮುಂಜ, ಪುತ್ತೂರು ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಪೂರ್ಣೇಶ್ ಭಂಡಾರಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿ ಕಾರ್ಯದರ್ಶಿ ಜೋನ್ ಸಿರಿಲ್ ರೊಡ್ರಿಗಸ್, ಪುತ್ತೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸೀತಾ ಭಟ್, ಪಾಣಾಜೆ ವಲಯ ಅಧ್ಯಕ್ಷ ಬಾಬು ರೈ ಕೋಟೆ, ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಕೋಶಾಧಿಕಾರಿ ಶುಭಮಾಲಿನಿ ಮಲ್ಲಿ, ಪುತ್ತೂರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ರಶೀದ್ ಅಮ್ಚಿನಡ್ಕ, ಪುತ್ತೂರು ವಿಧಾನಸಭಾ ಕ್ಷೇತ್ರದ ಎನ್‌ಎಸ್‌ಯುಐ ಅಧ್ಯಕ್ಷ ಚಿರಾಗ್ ರೈ ಮೇಗಿನಗುತ್ತು, ಪ್ರಧಾನ ಕಾರ್ಯದರ್ಶಿ ಹಾಗೂ ಜಿಡೆಕಲ್ಲು ಸರ್ಕಾರಿ ಕಾಲೇಜು ಎನ್‌ಎಸ್‌ಯುಐ ಘಟಕದ ಅಧ್ಯಕ್ಷ ಎಡ್ವರ್ಡ್‌ರವರುಗಳು ರಾಜೀನಾಮೆ ಸಲ್ಲಿಸಲು ನಿರ್ಧರಿಸಿರುವುದಾಗಿ ಕಾರ್ಮಿಕ ಘಟಕ ಅಧ್ಯಕ್ಷ ಶರೂನ್ ಸಿಕ್ವೇರಾರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here