ಸವಣೂರು : ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರ

0

ಕಡಬ : ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ಪುಣ್ಚಪ್ಪಾಡಿಯ ನೇರೋಳ್ತಡ್ಕದಲ್ಲಿ ನಡೆಯಿತು.

ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಕೃಷ್ಣ ಶೆಟ್ಟಿ ಕಡಬ ಅವರು ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಅವರ ಪ್ರಚಾರದ ಕುರಿತಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಮಾಜಿ ಮಂಡಲ ಅಧ್ಯಕ್ಷ ಎಸ್.ಎನ್.ಮನ್ಮಥ, ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಪ್ರಭಾರಿ ಕುಶಾಲಪ್ಪ ಗೌಡ ಪೂವಾಜೆ, ಜಿ.ಪಂ.ಮಾಜಿ ಸದಸ್ಯ ವೆಂಕಟ್ ದಂಬೆಕೋಡಿ, ಪಾಲ್ತಾಡಿ-ಪುಣ್ಚಪ್ಪಾಡಿ ಶಕ್ತಿ ಕೇಂದ್ರದ ಪ್ರಮುಖ್ ಇಂದಿರಾ ಬಿ.ಕೆ., ಸವಣೂರು ಶಕ್ತಿ ಕೇಂದ್ರದ ಪ್ರಮುಖ್ ತಾರಾನಾಥ ಕಾಯರ್ಗ, ಸವಣೂರು ಗ್ರಾ.ಪಂ.ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಸವಣೂರು ಸಿಎ ಬ್ಯಾಂಕ್ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಶಕ್ತಿ ಕೇಂದ್ರ, ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here