ಪುತ್ತೂರು ಲಿಟ್ಲ್ ಫ್ಲವರ್ ಶಾಲೆ ದರ್ಬೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ

0

ಪುತ್ತೂರು:ಪುತ್ತೂರು ಲಿಟ್ಲ್ ಫ್ಲವರ್ ಶಾಲೆ ದರ್ಬೆ ಇಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ರವರ 132 ನೇ ಜಯಂತಿ ಆಚರಣೆಯನ್ನು ಶಾಲಾ ಹಿರಿಯ ಶಿಕ್ಷಕಿ ಭಗಿನಿ ವಿನೀತಾ ಪಿರೇರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಡಾ ಬಿ ಆರ್ ಅಂಬೇಡ್ಕರ್ ರವರ ಜೀವನ, ಶಿಕ್ಷಣ, ಸಾಧನೆ ಹಾಗೂ ಈ ದೇಶಕ್ಕೆ ಅವರ ಕೊಡುಗೆಯ ಬಗ್ಗೆ ಶಾಲಾ ಶಿಕ್ಷಕರಾದ ಬಾಲಕೃಷ್ಣ ಪೊರ್ದಾಲ್ ಮಾಹಿತಿ ನೀಡಿದರು. ವೇದಿಕೆಯಲ್ಲಿ ಶಾಲಾ ಹಿರಿಯ ಶಿಕ್ಷಕಿಯರಾದ ವಿಲ್ಮಾ ಫೆರ್ನಾಂಡೀಸ್ ಹಾಗೂ ಎಲಿಜ್ ಅಂದ್ರಾದೆ ಉಪಸ್ಥಿತರಿದ್ದರು .ಶಿಕ್ಷಕಿ ಭವ್ಯ ಸ್ವಾಗತಿಸಿ.ಶಿಕ್ಷಕಿ ನಳಿನಾಕ್ಷಿ ವಂದಿಸಿ. ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here