ಪುತ್ತೂರು: ಮೇ 10ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಿಂದುತ್ವದ ಹೆಸರಿನಲ್ಲಿ ಚುನಾವಣಾ ಕಣಕ್ಕಿಳಿದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಚುನಾವಣಾ ನಿರ್ವಹಣಾ ಕಚೇರಿಯ ಉದ್ಘಾಟನೆ ಎ.16ರಂದು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದ ಬಳಿ ನಡೆಯಿತು.
ಬೆಳಿಗ್ಗೆ ಗಣಪತಿ ಹೋಮದ ಮೂಲಕ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಮಂದಿ ಬೆಂಬಲಿಗರು ಭಾಗವಹಿಸಿದ್ದರು.