ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ಇದರ 2023-2026ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರಿಫ್ ಪಡುಬಿದ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿಯಾಗಿ ಪುಷ್ಪರಾಜ್.ಬಿ.ಎನ್., ಖಜಾಂಜಿಯಾಗಿ ವಿಜಯ ಕೋಟ್ಯಾನ್ ಪಡು, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಿತೇಂದ್ರ ಕುಂದೇಶ್ವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿಯ 7 ಸದಸ್ಯ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಆರ್.ಸಿ.ಭಟ್, ಸತೀಶ್ ಇರಾ, ದಯಾನಂದ ಕುಕ್ಕಾಜೆ , ಹರೀಶ್ ಮೋಟುಕಾನ, ಆತ್ಮಭೂಷಣ್, ಬಿ.ಎಸ್.ಜೀವನ್, ಕೆ.ವಿಲ್ಪ್ರೆಡ್ ಡಿಸೋಜಾ ಆಯ್ಕೆಯಾಗಿದ್ದಾರೆ.
ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಚುನಾವಣಾಧಿಕಾರಿಯಾಗಿ ಹಾಗೂ ನಿವೃತ್ತ ಉಪ ತಹಶೀಲ್ದಾರ್ ರಾಮಚಂದ್ರ ಸಹಾಯಕ ಚುನಾವಣಾಧಿಕಾರಿಯಾಗಿದ್ದರು.