ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17 ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು.ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಭಕ್ತಾದಿಗಳು ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದರು.
ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆದ ಬ್ರಹ್ಮರಥೋತ್ಸವದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್ ಮತ್ತು ಸದಸ್ಯರ ಉಪಸ್ಥಿತಿಯಲ್ಲಿ ಉತ್ಸವಾದಿಗಳು ನಡೆಯಿತು. ಬ್ರಹ್ಮರಥೋತ್ಸವದ ಮೊದಲು ನಡೆದ ಆಕರ್ಷಕ ಸುಡುಮದ್ದು ಪ್ರದರ್ಶನ `ಪುತ್ತೂರು ಬೆಡಿ’ ಅದ್ದೂರಿಯಾಗಿ ನಡೆಯಿತು. ಸುಮಾರು ರೂ. 6 ಲಕ್ಷ ವೆಚ್ಚದ ಸಿಡಿಮದ್ದು ಪ್ರದರ್ಶನ ನಡೆಯಿತು. ಶಿವಕೃಪಾ ಜನರಲ್ ಸ್ಟೋರ್ ಅವರಿಂದ ಸುಡುಮದ್ದು ಪ್ರದರ್ಶನ ನಡೆಯಿತು.