ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ 6ನೇ ವಾರ್ಷಿಕ ಸಮಾರಂಭವು ಏಪ್ರಿಲ್ 19 ರಂದು ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾಂಸ್ಕೃತಿಕ ವೇದಿಕೆಯಲ್ಲಿ ಜರಗಲಿದೆ.
ಸಭಾ ಕಾರ್ಯಕ್ರಮ:
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ ಗೌರವಾಧ್ಯಕ್ಷರಾಗಿರುವ ಕೆ. ಸೀತಾರಾಮ ರೈ ಸವಣೂರುರವರು ವಹಿಸಲಿದ್ದಾರೆ. ಉದ್ಘಾಟನೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವಪ್ರಸಾದ್ ಮುಳಿಯರವರು ನೆರವೇರಿಸಲಿದ್ದಾರೆ. ಗೌರವ ಉಪಸ್ಥಿತಿಗಳಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್.ಎನ್.ಆರ್.ಸಿ.ಸಿ. ಪುತ್ತೂರು ಇದರ ನಿವೃತ್ತ ವಿಜ್ಞಾನಿ ಡಾ|ಎನ್. ಯದುಕುಮಾರ್ ಕೊಳತ್ತಾಯ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ ಶೆಟ್ಟಿರವರು ಭಾಗವಹಿಸಲಿದ್ದಾರೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪುತ್ತೂರು ಘಟಕದ ಅಧ್ಯಕ್ಷ ನೋಣಾಲು ಜೈರಾಜ್ ಭಂಡಾರಿರವರು ಅತಿಥಿಗಳನ್ನು ಸ್ವಾಗತಿಸಲಿದ್ದಾರೆ.
ಯಕ್ಷಗಾನ ಬಯಲಾಟ:
ಸಭಾ ಕಾರ್ಯಕ್ರಮದ ಬಳಿಕ ಸಂಜೆ ಗಂಟೆ 7 ರಿಂದ ರಾತ್ರಿ ಗಂಟೆ 12ರ ತನಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾಂಸ್ಕೃತಿಕ ವೇದಿಕೆಯಲ್ಲಿ ಪಟ್ಲ ಸತೀಶ್ ಶೆಟ್ಟಿರವರ ನೇತೃತ್ವದಲ್ಲಿ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಜನಪ್ರಿಯ ಪ್ರಸಂಗ “ಧರ್ಮ ಸಿಂಹಾಸನ” (ಪೌರಾಣಿಕ ಪುಣ್ಯ ಕಥಾನಕ) ಪ್ರದರ್ಶನಗೊಳ್ಳಲಿದೆ.
ಕಲಾವಿದರ ದಂಡು:
ಭಾಗವತರಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಪ್ರಫುಲ್ಲಚಂದ್ರ ನೆಲ್ಯಾಡಿ, ಮದ್ದಳೆ-ಚೆಂಡೆ ವಾದಕರಾಗಿ ಗುರುಪ್ರಸಾದ್ ಬೊಳಿಂಜಡ್ಕ, ಪ್ರಶಾಂತ್ ಶೆಟ್ಟಿ ವಗೆನಾಡು, ಕೌಶಿಕ್ ರಾವ್ ಪುತ್ತಿಗೆ, ಚಕ್ರತಾಳದಲ್ಲಿ ರಾಜೇಂದ್ರ ಕೃಷ್ಣ ಸ್ತ್ರೀ ಪಾತ್ರದಾರಿಗಳಾಗಿ ಅಕ್ಷಯ್ ಕುಮಾರ್ ಮಾರ್ನಾಡ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು, ಹಾಸ್ಯ ಕಲಾವಿದರಾಗಿ ಸಂದೇಶ್ ಮಂದಾರ, ಪೂರ್ಣೇಶ್ ಆಚಾರ್ಯ,ಪ್ರಧಾನ ಪಾತ್ರಧಾರಿಗಳಾಗಿ ರಾಧಾಕೃಷ್ಣ ನಾವಡ ಮಧೂರು, ದಿವಾಣ ಶಿವಶಂಕರ್ ಭಟ್, ದಿನೇಶ್ ಶೆಟ್ಟಿ ಕಾವಳಕಟ್ಟಿ, ಸಂತೋಷ್ ಕುಮಾರ್, ರಾಕೇಶ್ ರೈ ಅಡ್ಕ, ಡಿ. ಮಾಧವ ಬಂಗೇರ ಕೊಳ್ತಮಜಲ್, ಮೋಹನ್ ಬೆಳ್ಳಿಪ್ಪಾಡಿ, ಲೋಕೇಶ್ ಮುಳ್ಳೂರು, ಜಯಕೀರ್ತಿ ಜೈನ್ ಮಾಳ, ಮನೀಷ್ ಪಾಟಾಳಿ ಎಡನೀರು, ಸಚಿನ್ ಅಮೀನ್ ಉದ್ಯಾವರ, ಮಧುರಾಜ್ ಪೆರ್ಮುದ, ಭುವನ್ ಮೂಡುಜೆಪ್ಪು, ಹರಿರಾಜ್ ಶೆಟ್ಟಿಗಾರ್ ಕಿನ್ನಿಗೋಳಿ, ರಮೇಶ್ ಪಟ್ರಮೆ, ಮನೋಜ್ ವೇಣೂರು, ಮನ್ವಿತ್ ನಿಡ್ಕೊಡಿ, ಲಕ್ಷ್ಮಣ ಪೆರ್ಮುದೆ, ದಿವಾಕರ ಕಣಿಯೂರುರವರು ಅಭಿನಯಿಸಲಿದ್ದಾರೆ.
ಯಕ್ಷಗಾನ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.