ಜೆಡಿಎಸ್ ಅಭ್ಯರ್ಥಿಯಾಗಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ನಾಳೆ (ಎ.19) ನಾಮಪತ್ರ ಸಲ್ಲಿಕೆ

0

ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಎ.19ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ 9.30ಕ್ಕೆ ದರ್ಬೆ ವೃತ್ತದ ಬಳಿಯಿಂದ ಮೆರವಣಿಗೆ ಹೊರಡಲಿದೆ. ಬಳಿಕ ಮೆರವಣಿಗೆಯು ಮುಖ್ಯರಸ್ತೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಇದಕ್ಕೆ ಪೂರಕವಾಗಿ ಎ.18ರಂದು ಮಸೀದಿ, ಚರ್ಚ್ ಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಗುವುದು. ಪಕ್ಷದ ಪದಾಽಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಕ್ಷದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here