ಎ.20 ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರಿಂದ ನಾಮಪತ್ರ ಸಲ್ಲಿಕೆ

0

ಪುತ್ತೂರು : ಇಲ್ಲಿನ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪ ಗೌಡರವರು ಏ.20 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಕಾರ್ಯಕರ್ತರ ಹಾಗೂ ಬೆಂಬಲಿಗರ ಸಮಾವೇಶ ನಡೆಸಿ ಕಾಲ್ನಡಿಗೆಯ ಮೂಲಕ ಕೋರ್ಟು ರಸ್ತೆಯಲ್ಲಿ ಸಾಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ಬೆಳಿಗ್ಗೆ ಗಂಟೆ 9.30ರಿಂದ ಮೆರವಣಿಗೆ ಪ್ರಾರಂಭಗೊಳ್ಳಲಿದೆ. ಚಲನಚಿತ್ರ ನಟಿ ಶೃತಿ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಇದರ ಜೊತೆಗೆ ಕೇಂದ್ರದ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.

ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸುವಂತೆ ಸಂಜೀವ ಮಠಂದೂರು ವಿನಂತಿ
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಮುಂದೆ ಬೆಳಿಗ್ಗೆ ಗಂಟೆ 9ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಯಲಿದೆ. ಈ ಸಂದರ್ಭ ಚಲನಚಿತ್ರ ನಟಿ ಶೃತಿ ಮತ್ತು ಸಂಸದ ತೇಜಸ್ವಿ ಸೂರ್ಯ ಭಾಗವಹಿಸಲಿದ್ದಾರೆ. ಇದರ ಜೊತೆಗೆ ನನ್ನ ಶಾಸಕತ್ವ ಅವಧಿಯಲ್ಲಿ ನಡೆದ ರೂ. 1500 ಕೋಟಿ ಅಭಿವೃದ್ಧಿ ಕಾಮಗಾರಿಗಳು ಆಶಾ ತಿಮ್ಮಪ್ಪ ಅವರ ಗೆಲುವಿಗೆ ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ 220 ಬೂತ್ ಕಾರ್ಯಕರ್ತರು, ಹಿತೈಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶಾಸಕ ಸಂಜೀವ ಮಠಂದೂರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here