





ಕಾಣಿಯೂರು :ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಏ.18 ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಅದ್ದೂರಿ ಮೆರವಣಿಗೆ ನಡೆಯಿತು.




ಶ್ರೀ ರಾಮಪೇಟೆಯ ಶ್ರೀರಾಮ ಭಜನಾ ಮಂದಿರದ ಬಳಿಯಿಂದ ಮೆರವಣಿಗೆ ನಗರದ ಬೀದಿಯಲ್ಲಿ ಸಾಗಿ ಬಂದಿತು. ಶ್ರೀರಾಮ ಪೇಟೆಯಿಂದ ನಗರದ ರಸ್ತೆಯಲ್ಲಿ ಸಾಗಿ ಬಂದು ರಥಬೀದಿಯಾಗಿ ತಾಲೂಕು ಕಚೇರಿ ಬಳಿಯ ಪುರಭವನದ ಸಮೀಪದ ವರೆಗೆ ಮೆರವಣಿಗೆ ಸಾಗಿ ಬಂತು. ಬಳಿಕ ತಾಕೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಎಸ್.ಅಂಗಾರ, ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.





ನಾಮಪತ್ರ ಸಲ್ಲಿಕೆ –
ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಏ.18 ರಂದು ನಾಮಪತ್ರ ಸಲ್ಲಿಸಿದ್ದಾರೆ. ಸುಳ್ಯ ಮಿನಿ ವಿಧಾನ ಸೌಧದಲ್ಲಿನ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಅರುಣ್‌ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಉಪಸ್ಥಿತರಿದ್ದರು. ಭಾಗೀರಥಿ ಮುರುಳ್ಯ ಅವರ ಜೊತೆ ಸಚಿವ ಎಸ್.ಅಂಗಾರ, ಬಿಜೆಪಿ ಮಂಡಲ ಸನಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಎ.ವಿ.ತೀರ್ಥರಾಮ, ಶ್ರೀಪತಿ ಭಟ್ ಉಪಸ್ಥಿತರಿದ್ದರು.









