ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಚುನಾವಣೆ ಸಿದ್ಧತಾ ಪೂರ್ವಭಾವಿ ಸಮಾಲೋಚನೆ ಸಭೆ

0

ಕ್ಷೇತ್ರದ ಮತದಾರರಿಗೆ ಸುಳ್ಳು ಭರವಸೆ ನೀಡಲಾರೆ – ಸಾಮಾಜಿಕ ಸೇವೆ ನನ್ನ ಬದುಕಿನ ನಿರಂತರ ಪ್ರಕ್ರಿಯೆ:ಅಶೋಕ್ ಕುಮಾರ್ ರೈ

ವಿಟ್ಲ: ಕ್ಷೇತ್ರದ ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಸಾಮಾಜಿಕ ಸೇವೆ ನನ್ನ ಬದುಕಿನ ನಿರಂತರ ಪ್ರಕ್ರಿಯೆ. ಪುತ್ತೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕನಾಗಿ ಆಯ್ಕೆಯಾದರೆ ನ್ಯಾಯಯುತವಾಗಿ ದುಡಿಯುತ್ತೇನೆ. ಎ.19 ರಂದು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಹಸ್ರಾರು ಕಾರ್ಯಕರ್ತರು, ಅಭಿಮಾನಿಗಳು ಸಹಕರಿಸ ಬೇಕೆಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೇಳಿದರು.


ಅವರು ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆಯ ಬಗ್ಗೆ ಪೂರ್ವಭಾವಿ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಸದಸ್ಯ ಎಂ.ಎಸ್ ಮಹಮ್ಮದ್, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಲುಕ್ಮನ್ ಬಂಟ್ವಾಳ, ಕಾಂಗ್ರೆಸ್ ಉಸ್ತುವಾರಿ ನೂರುದ್ದೀನ್ ಸಾಲ್ಮರ, ಯುವ ಕಾಂಗ್ರೆಸ್ ಉಸ್ತುವಾರಿ ಸಜಿತ್ ಕಣ್ಣೂರು, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ, ಪ್ರವೀಣಚಂದ್ರ ಆಳ್ವ, ಕಾಂಗ್ರೆಸ್ ವಲಯಾಧ್ಯಕ್ಷರು, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here