ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವದ ಮಾರನೆ ದಿನ ಎ.18ರಂದು ಸಂಜೆ ಶ್ರೀದೇವರು ಅವಧೃತ ಸ್ನಾನಕ್ಕೆ ಹೊರಟು ಎ.19ರಂದು ಮುಂಜಾನೆ ಗಂ.6.45 ಕ್ಕೆ ಹೊತ್ತಿಗೆ ವೀರಮಂಗಲಕ್ಕೆ ತಲುಪಿ ಅಲ್ಲಿ ಕುಮಾರಧಾರ ಹೊಳೆಯಲ್ಲಿ ಧಾರ್ಮಿಕ ಸಂಪ್ರದಾಯದಂತೆ ಶ್ರೀ ದೇವರ ಅವಧೃತ ಸ್ನಾನ ನಡೆಯಿತು.
ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ವೇ ಮೂ ಶ್ರೀಧರ್ ತಂತ್ರಿಯವರ ವೈದಿಕತ್ವದಲ್ಲಿ ಶ್ರೀ ದೇವರಿಗೆ ವಿವಿಧ ಅಭಿಷೇಕಗಳೊಂದಿಗೆ ಸ್ನಾನ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಸಹಿತ ಸದಸ್ಯರು ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಮತ್ತು ಭಕ್ತರು ಉಪಸ್ಥಿತರಿದ್ದರು.