ಪುತ್ತೂರು : ತುಳುನಾಡಿನ ನಂಬಿಕೆ, ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬಿಸು ಪರ್ಬ ಆಚರಣೆಯಂಥ ಕಾರ್ಯಕ್ರಮಗಳು ಅಗತ್ಯ ಎಂದು ದ್ಯೆವ ನರ್ತಕ ಮತ್ತು ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜ್ ಸಿವಿಲ್ ವಿಭಾಗ ಉಪನ್ಯಾಸಕ ಡಾ.ರವೀಶ್ ಪಡುಮಲೆ ಹೇಳಿದರು. ಎಸ್.ಡಿ.ಯಂ ಕಾಲೇಜಿನ ಇತಿಹಾಸ ವಿಭಾಗ ಇತ್ತೀಚೆಗೆ ಆಯೋಜಿಸಿದ ಬಿಸು ಪರ್ಬ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಎಸ್.ಡಿ.ಯಂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಪಠ್ಯದ ಜತೆಗೆ ನ್ಯೆತಿಕ ಮೌಲ್ಯ ಬಿತ್ತುತ್ತಿದೆ ಎಂದು ವಿದ್ಯಾರ್ಥಿಗಳ ಜೊತೆಗೆ ಹಂಚಿಕೊಂಡರು.
ಪ್ರಾಂಶುಪಾಲರಾದ ಡಾ.ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ ಬಿಸು ಪರ್ಬವು ಸಂಸ್ಕೃತಿಯ ದ್ಯೋತಕವಾಗಿದೆ ಎಂದು ಹೇಳಿದರು.
ಬಿಸು ಪರ್ಬ – 2023 ರ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಭಾಗ ಮುಖ್ಯಸ್ಥ ಡಾ.ಸನ್ಮತಿ ಕುಮಾರ್ , ಪ್ರಾಧ್ಯಾಪಕಿ ಅಭಿಗ್ನ ಉಪಾಧ್ಯಾಯ, ವಿದ್ಯಾರ್ಥಿ ಪ್ರತಿನಿಧಿ ಮನೋಜ್ ಮತ್ತು ಗೀತಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅನ್ನಪೂರ್ಣ ಕಾರ್ಯಕ್ರಮ ನಿರೂಪಿಸಿದರು. ಜಕ್ಷಿತಾ ಸ್ವಾಗತಿಸಿ, ಅಮಿತಾ ವಂದಿಸಿದರು