ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರಿಂದ ನಾಳೆ (ಏ.20) ನಾಮಪತ್ರ ಸಲ್ಲಿಕೆ; ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಪಾದಯಾತ್ರೆ; ಚಲನಚಿತ್ರ ನಟಿ ಶೃತಿ, ಸಂಸದ ತೇಜಸ್ವಿ ಸೂರ್ಯ ಭಾಗಿ

0

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಏ.20ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಅಶೀರ್ವಾದ ಪಡೆದು ಪಾದಯಾತ್ರೆ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ಅಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ ಗಂಟೆ 9.30ರಿಂದ ಮೆರವಣಿಗೆ ಪ್ರಾರಂಭಗೊಳ್ಳಲಿದೆ. ಚಲನಚಿತ್ರ ನಟಿ ಶೃತಿ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಇದರ ಜೊತೆಗೆ ಕೇಂದ್ರದ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸ್ಮೃತಿ ಇರಾನಿ ಬದಲು ತೇಜಸ್ವಿ ಸೂರ್ಯ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರವರು ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಅಮೇಠಿ ಲೋಕಸಭಾ ಕ್ಷೇತ್ರದ ಸದಸ್ಯೆ, ಕೇಂದ್ರ ಸಚಿವೆ ಸ್ಮೃತಿ ಇರಾನಿಯವರನ್ನು ಕರೆತರಲು ಪ್ರಯತ್ನ ನಡೆಸಲಾಗಿತ್ತು. ಆದರೆ ಬೇರೆ ಕಾರ್ಯಕ್ರಮ ನಿಗದಿಯಾಗಿರುವುದರಿಂದ ಪುತ್ತೂರುಗೆ ಬರಲು ಸಾಧ್ಯವಾಗದ ಕಾರಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.

ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಿ- ಸಂಜೀವ ಮಠಂದೂರು ಮನವಿ

ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಮೊದಲು ಬೆಳಿಗ್ಗೆ ಗಂಟೆ 9ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಯಲಿದೆ. ನನ್ನ ಶಾಸಕತ್ವ ಅವಧಿಯಲ್ಲಿ ನಡೆದ ರೂ.1,500 ಕೋಟಿಯ ಅಭಿವೃದ್ಧಿ ಕಾಮಗಾರಿಗಳು ಆಶಾ ತಿಮ್ಮಪ್ಪ ಅವರ ಗೆಲುವಿಗೆ ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ 220 ಬೂತ್‌ಗಳಿಂದಲೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶಾಸಕ ಸಂಜೀವ ಮಠಂದೂರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here