ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಏ.18ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದರು. ಬಳಿಕ ಅವರು ಕ್ಷೇತ್ರದ ಧರ್ಮದರ್ಶಿ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.