ಪುತ್ತೂರು:ಕಲಿಯುಗ ಕಲೆ, ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.20ರಂದು ರಾತ್ರಿ ದೈವಗಳಿಗೆ ಕೋಲ, ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಕ್ಷೇತ್ರದಲ್ಲಿ ಪ್ರತಿ ತಿಂಗಳ ಸಂಕ್ರಮಣದಂದು ರಾತ್ರಿ ಕೆಂಡದರ್ಶನ ಸೇವೆ, ಅಗ್ನಿ ಕಲ್ಲುರ್ಟಿ ಮತ್ತು ಸ್ವಾಮಿ ಕೊರಗಜ್ಜ ದೈವಕ್ಕೆ ಕೋಲ, ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಹಿನ್ನೆಲೆಯಲ್ಲಿ ತಿಂಗಳ ಸಂಕ್ರಮಣ ಕೋಲ, ಅಗೇಲು ಸೇವೆ ಧ್ವಜಾವರೋಹಣದ ಬಳಿಕ ನಡೆಯುತ್ತಿರುವುದರಿಂದ ಏ.20ರಂದು ರಾತ್ರಿ ನಡೆಯುತ್ತದೆ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ. ಏ.23ರಂದು ಮಧ್ಯಾಹ್ನ ಕ್ಷೇತ್ರದಲ್ಲಿ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ ಮತ್ತು ದೈವಗಳಿಗೆ ಅಗೇಲು ಸೇವೆ ನಡೆಯುತ್ತದೆ ಎಂದು ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದ್ದಾರೆ.