ಪುತ್ತೂರು : ಚುನಾವಣಾ ಪ್ರಚಾರ ಸಹಿತ ಇನ್ನಿತರ ಕಾರ್ಯಗಳಿಗೆ 18 ವರ್ಷ ಪ್ರಾಯದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ದ.ಕ. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ಕೇಂದ್ರ ಸರಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಯಂತೆ 18 ವರ್ಷ ಪ್ರಾಯದೊಳಗಿನ ಎಲ್ಲರನ್ನು ಮಕ್ಕಳು ಎಂದು ಪರಿಗಣಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಕಾಯ್ದೆಯನ್ನು ಉಲ್ಲಂಘಿಸಿ 18 ವರ್ಷ ಪ್ರಾಯದೊಳಗಿನ ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ-1986ರ ಅನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.