ವಿಟ್ಲ: ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಏ. 20ರಂದು ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈರವರು ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಇಂತಹ ವಿಷಯಗಳ ಬಗ್ಗೆ ಬಲವಾಗಿ ಮಾತನಾಡುವವರು ಯಾರೂ ಇಲ್ಲ. ಅದಕ್ಕೋಸ್ಕರವಾದರೂ ರಮಾನಾಥ ರೈ ಗೆದ್ದು ಬರಬೇಕು ಎಂದು ಜನಾರ್ದನ ಪೂಜಾರಿ ಈ ಸಂದರ್ಭ ಅಭಿಪ್ರಾಯಪಟ್ಟರು. ಈ ಚುನಾವಣೆಯಲ್ಲಿ ರಮಾನಾಥ ರೈ ಮತ್ತೊಮ್ಮೆ ಗೆದ್ದು ಬರಲಿ ಎಂದು ಅವರು ಹಾರೈಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.