ಸುಳ್ಯ ಪಕ್ಷೇತರ ಅಭ್ಯರ್ಥಿಯಾಗಿ ಗುರುವಪ್ಪ ಕಲ್ಲುಗುಡ್ಡೆ ನಾಮಪತ್ರ ಸಲ್ಲಿಕೆ

0

ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗುರುವಪ್ಪ ಕಲ್ಲುಗುಡ್ಡೆ ಏ.20ರಂದು ನಾಮಪತ್ರ ಸಲ್ಲಿಸಿದರು. ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿ ಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಆನಂದ ಬೆಳ್ಳಾರೆ, ವಿಶ್ವನಾಥ ಅಲೆಕ್ಕಾಡಿ,ಶೀನ ಬಾಳಿಲ, ಕೆ.ಪಿ.ಆನಂದ, ವಸಂತ ಕುಬಲಾಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here