ದ್ವಿತೀಯ ಪಿಯುಸಿ ಫಲಿತಾಂಶ ಏ.21ರಂದು ಪ್ರಕಟ

0

ಬೆಂಗಳೂರು: ಕಳೆದ ತಿಂಗಳು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಏ.21ರಂದು ಪ್ರಕಟವಾಗಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು http://www.karresults.nic.in/ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.ಏ.20ರ ಬೆಳಗ್ಗೆ 10 ಗಂಟೆಗೆ ಪರೀಕ್ಷಾ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗುತ್ತದೆ.ನಂತರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು https://karresults.nic.in/ ಜಾಲತಾಣದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯ ನಂತರ ಪರಿಶೀಲನೆ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here