ದ್ವಿತೀಯ ಪಿಯುಸಿ: ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ

0

ನೆಲ್ಯಾಡಿ: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.95 ಫಲಿತಾಂಶ ಲಭಿಸಿದೆ.


ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ 29 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 6 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಶೆರ್ವಿನ್ ಶಾಜಿ 584, ರೋಯಲ್ ಬಿನೋಯ್ 562, ವಿಭಾಶ್ರೀ 554, ಅಹ್ಮದ್ ರಫೀ 550, ಸಮೀಕ್ಷಾ ಎಸ್.ಎಂ.531, ವಿಂಧ್ಯಾ 515 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.


ವಿಜ್ಞಾನ ವಿಭಾಗ:
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 49 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ತೇರ್ಗಡೆಗೊಂಡು 95 ಶೇ. ತೇರ್ಗಡೆ ಫಲಿತಾಂಶ ಲಭಿಸಿದೆ. 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 35 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ನಾಲ್ವರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಅಶ್ವತ್ ಜಾನ್ 529, ಫಾತಿಮಾ ಫಾಸಿಲಾ 522, ಜೀನಾ ಎ.ಕೆ.522, ಶ್ರೇಯಾ ಜೋಸೆಫ್ 518, ನಿಶಾ 518, ನಿತಿನ್ ಮ್ಯಾಥ್ಯು 515 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here