ಬಂಟ್ವಾಳದಲ್ಲಿ 6 ನಾಮಪತ್ರ ಸ್ವೀಕೃತ, 2 ತಿರಸ್ಕೃತ

0

ವಿಟ್ಲ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದ ಚುನಾವಣೆಗೆ ಒಟ್ಟು 8 ನಾಮಪತ್ರ ಸಲ್ಲಿಕೆಯಾಗಿದ್ದು, ಈ ಪೈಕಿ ಎರಡು ನಾಮಪತ್ರಗಳು ತಿರಸ್ಕೃತಗೊಂಡಿದೆ.
ಭಾರತೀಯ ಜನತಾ ಪಾರ್ಟಿಯ ರಾಜೇಶ್ ನಾಯ್ಕ್ ಯು, ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಎಂ. ಇಲಿಯಾಸ್, ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಯುವ (ಪಕ್ಷೇತರ ಅಭ್ಯರ್ಥಿ) ಅಬ್ದುಲ್ ಮಜೀದ್ ಖಾನ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ರಮಾನಾಥ ರೈ, ಜಾತ್ಯಾತೀತ ಜನತಾ ದಳದ ಪ್ರಕಾಶ್ ರಫಾಯಲ್ ಗೋಮ್ಸ್, ಆಮ್ ಆದ್ಮಿ ಪಕ್ಷದ ಪುರುಷೋತ್ತಮ ರವರ ನಾಮಪತ್ರ ಅಂಗೀಕೃತವಾಗಿರುತ್ತದೆ. ಉತ್ತಮ ಪ್ರಜಾಕೀಯ ಪಕ್ಷದ ಅನೀಶ್ ಶೆಟ್ಟಿಯವರು 10 ಸೂಚಕರ ಬದಲಾಗಿ ಕೇವಲ 7 ಸೂಚಕರನ್ನು ನೀಡಿರುತ್ತಾರೆ. ಪಕ್ಷೇತರ ಅಭ್ಯರ್ಥಿ ಬಿ. ಟಿ. ಕುಮಾರ್ ರವರು ನಾಮಪತ್ರ ಪೂರ್ಣವಾಗಿ ತುಂಬಿಸಿಲ್ಲ, ಠೇವಣಿ ಪಾವತಿಸಿಲ್ಲ, ಸೂಚಕರನ್ನು ನೀಡಿಲ್ಲ, ನಮೂನೆ 26 ತುಂಬಿಲ್ಲದ ಹಿನ್ನೆಲೆಯಲ್ಲಿ ಈ ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here