ನೆಲ್ಯಾಡಿ: 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ವಾಣಿಜ್ಯ ವಿಭಾಗದಲ್ಲಿ ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿಗೆ ಶೇ.100 ತೇರ್ಗಡೆ ಫಲಿತಾಂಶ ಲಭಿಸಿದೆ. ಕಲಾ ವಿಭಾಗಕ್ಕೆ 91.6 ಶೇ.ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ: ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 15 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ನಾಲ್ಕು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಯಾಗೂ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ವಾಣಿಜ್ಯದಲ್ಲಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ನಿಶಾ ಸಿ.ಜೆ. 580, ಕೀರ್ತನಾ 546, ಸೃಷ್ಠಿ 534, ವಿಜೇತ್ ಎಸ್. 534, ಪ್ರಣೀತ್ 529, ವರ್ಷಿತಾ ಪಿ.ಜಿ.529, ರಶ್ಮಿತಾ 515, ಯಶಸ್ವಿ ಟಿ.ಎಸ್.511 ಹಾಗೂ ಗಣಕ ವಿಜ್ಞಾನ ವಿಭಾಗದಲ್ಲಿ ಮಾನ್ಯ ಎಂ. 582, ಶೇಕ್ ಮಹಮ್ಮದ್ ಅಯಾನ್ 568, ಚೈತನ್ಯ ಹೆಚ್. 539, ಪ್ರಣಮ್ ಎಮ್. 536, ಪೂಜಾ 532, ಮಹಮ್ಮದ್ ಸುಹೈಲ್ 531, ಉಮೇಶ್ ನಾಯ್ಕ್ 512 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ.
ಕಲಾ ವಿಭಾಗ: ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 48 ವಿದ್ಯಾರ್ಥಿಗಳ ಪೈಕಿ 44 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.91.6 ಫಲಿತಾಂಶ ಲಭಿಸಿದೆ. ಮೂವರು ವಿಶಿಷ್ಠ ಶ್ರೇಣಿ, 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಹಾಗೂ 8 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶ್ರೇಯಾ ಎಂ.ಇ. 549, ಜಿತಿನ್ 517 ಹಾಗೂ ಆಯಿಷಾ ರಿನಾಝ್ 513 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.