ಉಪ್ಪಿನಂಗಡಿ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶೇ 100 ಫಲಿತಾಂಶ ದಾಖಲುಗೊಂಡು ಗ್ರಾಮೀಣ ಭಾಗದ ಸರಕಾರಿ ವಿದ್ಯಾ ಸಂಸ್ಥೆ ಗಮನಾರ್ಹ ಸಾಧನೆ ತೋರಿದೆ.
ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಒಟ್ಟು 95 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 65 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ತೇಜಸ್ 570 ಅಂಕ ಗಳಿಸುವುದರೊಂದಿಗೆ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಅಗ್ರಗಣ್ಯನಾಗಿ ಮೂಡಿ ಬಂದಿದ್ದಾರೆ. ಸದ್ರಿ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 94% ಫಲಿತಾಂಶ ದಾಖಲಾಗಿದ್ದು, 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ , 103 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 33 ವಿದ್ಯಾರ್ಥಿಗಳು ದ್ವಿತೀಯ, 18 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ರಹಿನಾಝ್ 591 ಅಂಕಗಳಿಸಿ ವಿಭಾಗದಲ್ಲಿ ಅಗ್ರಗಣ್ಯರಾಗಿ ಮೂಡಿ ಬಂದಿದ್ದಾರೆ. ಇದೇ ಕಾಲೇಜಿನ ಕಲಾ ವಿಭಾಗದಲ್ಲಿ 85 ಶೇ ಫಲಿತಾಂಶ ದಾಖಲಾಗಿದ್ದು, 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ , 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 28 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 31 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ದಿವ್ಯಾ 555 ಅಂಕಗಳೊಂದಿಗೆ ಕಲಾ ವಿಭಾಗದಲ್ಲಿ ಅಗ್ರಗಣ್ಯರಾಗಿ ಮೂಡಿಬಂದಿದ್ದಾರೆ.
ಉಪ್ಪಿನಂಗಡಿಯ ಇಂದ್ರಪ್ರಸ್ಥ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗವೊಂದೇ ಇದ್ದು, ಪರೀಕ್ಷೆ ಬರೆದ ಒಟ್ಟು 46 ವಿದ್ಯಾರ್ಥಿಗಳ ಪೈಕಿ 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 20ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಒರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಆಶಿಕಾ ಎಂ ೫೮೪ ಅಂಕ ಗಳಿಸಿ ಕಾಲೇಜಿಗೆ ಅಗ್ರಗಣ್ಯಳಾಗಿ ಮೂಡಿ ಬಂದಿದ್ದಾರೆ.