





ವಿಟ್ಲ:ಇಲ್ಲಿನ ಸಮೀಪದ ಮಂಗಳ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯು ಜರುಗಿತು.


ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಭ್ಯರ್ಥಿ ಆಶಾ ತಿಮ್ಮಪ್ಪ ಕಳೆದ 5 ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರಕಾರದ ಸಾಧನೆಗಳೇ ಬಿಜೆಪಿ ಗೆಲುವಿಗೆ ಶ್ರೀ ರಕ್ಷೆಯಾಗಿದೆ.ಕಳೆದ ಅವಧಿಯಲ್ಲಿ ಪುತ್ತೂರು ಕ್ಷೇತ್ರಕ್ಕೆ ಸಂಜೀವ ಮಠಂದೂರುರವರ ಮುತುವರ್ಜಿಯಿಂದ ಸಾವಿರಾರು ಕೋಟಿ ರೂಪಾಯಿಗಳ ಅನುದಾನಗಳು ಬಂದಿದ್ದು, ಮುಂದುವರಿದ ಭಾಗವಾಗಿ ಪುತ್ತೂರನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸುವಲ್ಲಿ ನನ್ನ ಪ್ರಾಮಾಣಿಕ ಪ್ರಯತ್ನವಿರುವುದಾಗಿ ತಿಳಿಸಿದರು.






ಬಿಜೆಪಿಯ ಸಾಧನೆಗಳೇ ಕ್ಷೇತ್ರದಲ್ಲಿ ಹೊಸ ಅಲೆ ಎದ್ದಿರುವುದು ಬೂತ್ ಮಟ್ಟದಲ್ಲಿ ಅತಿ ಹೆಚ್ಚು ಮತಗಳನ್ನು ಸೆಳೆಯುವ ಮೂಲಕ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು.ಇದಕ್ಕೂ ಮುನ್ನ ವಿಟ್ಲ ಅರಮನೆಯ ಅರಸರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.





