ಪುತ್ತೂರು : ಪುತ್ತೂರಿನ ಪಡೀಲು ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದುದ್ದನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ದೂರು ನೀಡಿರುವ ಎ.22ರಂದು ಸಂಜೆ ನಡೆದಿದೆ.
ಅನ್ಯಕೋಮಿನ ವ್ಯಕ್ತಿಯೊಬ್ಬರ ಕೋಳಿ ಅಂಗಡಿಯಲ್ಲಿ ದನದ ಮಾಂಸವನ್ನು ಮಾರಾಟ ಮಾಡುತ್ತಿರುವ ಆರೋಪದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ನಗರ ಠಾಣಾ ಪೊಲೀಸರು ಅಂಗಡಿಯ ಹೊರಗಡೆಯಿದ್ದ ಸುಮಾರು 1 ಕೆಜಿಯಷ್ಟು ಗೋ ಮಾಂಸವನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರವರು ಕಾರ್ಯಕರ್ತರ ಜೊತೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಅಧಿಕಾರಿಗಳ ಜೊತೆ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ.