ಸವಣೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಗೆಲುವಿಗಾಗಿ ಸವಣೂರು ಬಸದಿಯ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಹೂವಿನ ಪೂಜೆ ಸೇವೆ ಸಲ್ಲಿಸಲಾಯಿತು.
![](https://puttur.suddinews.com/wp-content/uploads/2023/04/IMG-20230423-WA0035.jpg)
ಹಿಂದೂಗಳ ಕಣ್ಮಣಿ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚಂಡ ಗೆಲುವು ಸಾಧಿಸುವಂತೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.