ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ಬಿ.ಎಸ್ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರಕಾರದ ಅಭಿವೃದ್ಧಿ ಯೋಜನೆಗಳು, ಹಿಂದುತ್ವ, ಸಂಘಟನೆಯೇ ಈ ಬಾರಿಯ ಚುನಾವಣಾ ವಸ್ತು ವಿಷಯವಾಗಿದ್ದು, ಕ್ಷೇತ್ರದಲ್ಲಿ ಸಂಜೀವ ಮಠಂದೂರುರವರು ಕೈಗೊಂಡ ಸಾವಿರಾರು ಕೋಟಿ ರೂಪಾಯಿಗಳ ಅನುದಾನಗಳು ,ಕ್ಷೇತ್ರದ ಜನತೆಗೆ ತಲುಪಿದ ಮೂಲಭೂತ ಸೌಕರ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಈ ಬಾರಿಯ ಚುನಾವಣೆಯನ್ನು ಎದುರಿಸಲಿದೆ. ಈ ನಿಟ್ಟಿನಲ್ಲಿ ಬಿಜೆಪಿಗೆ ತಮ್ಮ ಮತ ನೀಡುವಂತೆ ಬಿಜೆಪಿ ಅಭ್ಯರ್ಥಿ ಅಶಾ ತಿಮ್ಮಪ್ಪ ಅವರು ವಿನಂತಿಸಿದರು.
ಪಾಣಾಜೆ ಶಕ್ತಿ ಕೇಂದ್ರದ ಆರ್ಲಪದವು ಪರಾರಿ ಗಣಪತಿ ಬಲ್ಯಾಯರ ನಿವಾಸದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಪರ ಮತ ಯಾಚಿಸಿದರು. ವೇದಿಕೆಯಲ್ಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ಆರ್ ಸಿ ನಾರಾಯಣ್, ಜಿಲ್ಲಾ ಉಪಾಧ್ಯಕ್ಷರ ಬೂಡಿಯಾರ್ ರಾಧಾಕೃಷ್ಣ ರೈ, ಸುನೀಲ್ ದಡ್ಡು ಉಪಸ್ಥಿತರಿದ್ದರು.