ಶಾಂತಿನಗರ ಮಹಾವಿಷ್ಣು ದೇವಸ್ಥಾನಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

0

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಎ.23ರಂದು 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಸುಮಾರು ಐವತ್ತಕ್ಕೂ ಅಧಿಕ ಮಂದಿ ಈ ಸಂದರ್ಭದಲ್ಲಿ ಅರುಣ್ ಪುತ್ತಿಲರವರನ್ನು ಬರಮಾಡಿಕೊಂಡರು. ತಮ್ಮ ಅಭಿಮಾನಿಗಳ ಜತೆ ಮಾತುಕತೆ ನಡೆಸಿದ ಬಳಿಕ ಅರುಣ್ ಪುತ್ತಿಲರವರು ಕಾಂಗ್ರೆಸ್ ಮುಖಂಡ ಡಾ.ರಘು ಬಿ.ರವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

LEAVE A REPLY

Please enter your comment!
Please enter your name here