ಪುತ್ತೂರು : ಇಂದು ನಡೆದ ವಿಟ್ಲ ಯುವ ವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಮತಯಾಚನೆ ಮಾಡಿದ ಅಶೋಕ್ ರೈ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು. ಪಕ್ಷದ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

