ಪುತ್ತೂರು: ಲೋಕಕಲ್ಯಾಣಾರ್ಥ ಮತ್ತು ವರುಣನ ಕೃಪೆಗಾಗಿ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ ವತಿಯಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ವಿಶ್ವಹಿಂದೂ ಪರಿಷತ್ ಜಿಲ್ಲಾ ನ್ಯಾಯಾವಾದಿ ಮಾದವ ಪೂಜಾರಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸಂತೋಷ್ ಕೈಕಾರ, ಬಜರಂಗದಳ ನಗರ ಪ್ರಖಂಡ ಸಂಚಾಲಕ ಹರೀಶ್ ಕುಮಾರ್ ದೋಳ್ಪಾಡಿ, ನಗರ ಪ್ರಖಂಡ ಸಹಸಂಚಾಲಕ ಚೇತನ್ ಬೋಳ್ವಾರ್, ದೇವಳದ ವ್ಯವಸ್ಥಪನಾ ಸಮಿತಿ ಸದಸ್ಯ ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು.