ಸರ್ವೆ ವಲಯ: ಕಾಂಗ್ರೆಸ್ ಪ್ರಚಾರ ಸಭೆ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸರ್ವೆ ವಲಯ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಶೋಕ್ ರೈ, ಬಿಜೆಪಿ ಸರಕಾರದ ದುರಾಡಳಿತದ ಬಗ್ಗೆ ವಿವರಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಬೆಂಬಲಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ ಬಿ, ಬ್ಲಾಕ್ ಕಾಂಗ್ರೆಸ್ ವೀಕ್ಷಕ ಮುರಳಿಧರ ರೈ ಮಠಂತಬೆಟ್ಟು, ಮಹಮ್ಮದ್ ಬಡಗನ್ನೂರ್, ನೂರುದ್ದೀನ್ ಸಾಲ್ಮರ, ಶಕೂರ್ ಹಾಜಿ ರೆಂಜಲಾಡಿ, ಮತ್ತಿತರರು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here