ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಆರಂಭ

0

ಪುತ್ತೂರು:ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್‌ಗೆ ಸಂಯೋಜನೆ ಹೊಂದಿರುವ, ಕರ್ನಾಟಕ ಸರಕಾರದಿಂದ ಅನುದಾನಿತ ಮತ್ತು 1986ರಿಂದ ಇಂಜಿನಿಯರಿಂಗ್ ವೃತ್ತಿಗಳಲ್ಲಿ ತಾಂತ್ರಿಕ ಶಿಕ್ಷಣವನ್ನು ನೀಡುತ್ತಿರುವ ಶ್ರೀ ಮಹಾಲಿಂಗೇಶ್ವರ ಐಟಿಐಯಲ್ಲಿ 2023 ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ದಾಖಲಾತಿ ಆರಂಭವಾಗಿದೆ.

ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿ ಕನಿಷ್ಠ 14 ವರ್ಷದಿಂದ 40 ವರ್ಷ ವಯಸ್ಸಿನವರು ಡ್ರಾಫ್ಟ್‌ಮೆನ್ ಸಿವಿಲ್, ಇಲೆಕ್ಟ್ರೀಶಿಯನ್ ಮತ್ತು ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ವೃತ್ತಿಗಳಿಗೆ ಅರ್ಜಿ ಸಲ್ಲಿಸಬಹುದು. ತರಬೇತಿಯ ಅವಧಿ ಎರಡು ವರ್ಷವಾಗಿದ್ದು ಉದ್ಯೋಗ, ಸ್ವಉದ್ಯೋಗ ಮತ್ತು ಉನ್ನತ ಶಿಕ್ಷಣದಲ್ಲಿ ವಿಪುಲ ಅವಕಾಶಗಳಿವೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here