ಎ.26: ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಲೀಜಿಯನ್ ನೂತನ ಪದಾಧಿಕಾರಿಗಳ ಪದಗ್ರಹಣ

0

ನೆಲ್ಯಾಡಿ: ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಇದರ ನೆಲ್ಯಾಡಿ ಲೀಜಿಯನ್‌ನ 2023-24ನೇ ಸಾಲಿನ ಅಧ್ಯಕ್ಷ ನಾರಾಯಣ ಎನ್ ಬಲ್ಯ ಹಾಗೂ ತಂಡದ ಪದಗ್ರಹಣ ಸಮಾರಂಭ ಎ.26ರಂದು ಸಂಜೆ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ನ್ಯೂ ಮಿಲೆನಿಯಂ ಹಾಲ್‌ನಲ್ಲಿ ನಡೆಯಲಿದೆ. ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಇದರ ಪೂರ್ವಾಧ್ಯಕ್ಷ ಡಾ.ಕೇದಿಗೆ ಅರವಿಂದ ರಾವ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಇದರ ರಾಷ್ಟ್ರೀಯ ಉಪಾಧ್ಯಕ್ಷ ಜಿ.ಕೆ.ಹರಿಪ್ರಸಾದ್ ರೈಯವರು ಪದಗ್ರಹಣ ನೆರವೇರಿಸಲಿದ್ದಾರೆ. ರಾಷ್ಟ್ರೀಯ ನಿರ್ದೇಶಕ ಚೈತ್ರ ಕುಮಾರ್, ಸಂಯೋಜಕ ಡಾ.ಸದಾನಂದ ಕುಂದರ್‌ರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here