ಪುತ್ತೂರು: ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿ ಕೇಂದ್ರ ಆರೋಗ್ಯ ಮತ್ತು ಸಮಾಜಕಲ್ಯಾಣ ಇಲಾಖೆ ಸಚಿವೆ ಭಾರತಿ ಪವಾರ್ ಅವರು ಎ.25ರಂದು ಪುತ್ತೂರು ಬಿಜೆಪಿ ಕಚೇರಿಗೆ ಆಗಮಿಸಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.
ಬೆಳಿಗ್ಗೆ ಬಿಜೆಪಿ ಕಚೇರಿಗೆ ಅಗಮಿಸಿದ ಅವರನ್ನು ಪಕ್ಷದ ವತಿಯಿಂದ ಸ್ವಾಗತಿಸಲಾಯಿತು. ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಅರಸಿನ ಕುಂಕುಮ ನೀಡಿ ಪಕ್ಷದ ಕಚೇರಿಗೆ ಬರಮಾಡಿಕೊಂಡು ಅವರಿಗೆ ಸೀರೆ ಮತ್ತು ಬಲೆ ನೀಡಿ, ಮಲ್ಲಿಗೆ ಮುಡಿಸಿದರು. ಈ ಸಂದರ್ಭದಲ್ಲಿ ಅವರು ಭಾರತಿ ಪವಾರ್ ಅವರು ಮಾತನಾಡಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲರು ಪೂರ್ಣವಾಧಿ ಶ್ರಮಿಸಬೇಕೆಂದು ಹೇಳಿದರು. ಬಿಜೆಪಿ ಅಭ್ಯರ್ಥಿ ಅಶಾ ತಿಮ್ಮಪ್ಪ, ಶಾಸಕ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪಕ್ಷದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಎಸ್ ಅಪ್ಪಯ್ಯ ಮಣಿಯಾಣಿ, ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ರಾಜೇಶ್ ಕಾವೇರಿ, ಮಹಿಳಾ ಮೋರ್ಚಾದ ಶರಾವತಿ ರವಿನಾರಾಯಣ, ಜಿ.ಪಂ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಗೌರಿ ಬನ್ನೂರು, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ , ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾದ್ಯಕ್ಷ ಆರ್ ಸಿ ನಾರಾಯಣ್, ಜಿಲ್ಲಾ ಕಾರ್ಯದರ್ಶಿ ಬೂಡಿಯಾರು ರಾಧಾಕೃಷ್ಣ ರೈ, ವಿಭಾಗ ಸಹ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಯಶಸ್ವಿನಿ ಶಾಸ್ತ್ರಿ, ನಾಗವೇಣಿ, ಮಾದ್ಯಮ ವಕ್ತಾರ ಚಂದ್ರಶೇಖರ್ ರಾವ್ ಬಪ್ಪಳಿಗೆ, ಹರಿಪ್ರಸಾದ್ ಯಾದವ್ ಸಹಿತ ಪಕ್ಷದ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ