ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಂದ ವರುಣನ ಕೃಪೆ, ಲೋಕಕಲ್ಯಾಣಾರ್ಥವಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

0

ಪುತ್ತೂರು: ವರುಣನ ಕೃಪೆ ಮತ್ತು ಲೋಕಕಲ್ಯಾಣಾರ್ಥವಾಗಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಂದ ಎ.25 ರಂದು ಬೆಳಿಗ್ಗೆ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕೆ ಸೇವೆ ನೀಡಲಾಯಿತು.


ದೇವಳದ ನಿತ್ಯ ಬಲಿಯ ಬಳಿಕ ಅವರು ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ವರುಣನ ಕೃಪೆ ಮತ್ತು ಲೋಕಕಲ್ಯಾಣಾರ್ಥ ಪ್ರಾರ್ಥನೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಅವರು ಪ್ರಾರ್ಥನಾ ಸಂಕಲ್ಪ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್, ರಾಧಾಕೃಷ್ಣ ಗೌಡ ನಂದಿಲ, ಯು ಲೋಕೇಶ್ ಹೆಗ್ಡೆ, ಉದಯ ಹೆಚ್, ಚರಣ್ ಸಹಿತ ಹಲವಾರು ಮಂದಿ ಜೊತೆಗಿದ್ದರು.

LEAVE A REPLY

Please enter your comment!
Please enter your name here